
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಹಾಯವಾಣಿ ತೆರೆಯುವಂತೆ ಅನನ್ಯ ಭಟ್ ಪರ ವಕೀಲರಿಂದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿಗೆ ವರ್ಗಾಯಿಸುತ್ತಿದ್ದಂತೆ ಸಾಕಷ್ಟು ಮಂದಿ ನನಗೆ ಕರೆ ಮಾಡಿ, ತಮಗಾದ ಭಯಾನಕ ಅನುಭವ ಮತ್ತು ದುರಂತಗಳನ್ನು ತಿಳಿಸುತ್ತಿದ್ದಾರೆ. ಹಾಗಾಗಿ ಹೆಚ್ಚಿನ ಕುಟುಂಬಗಳು ಭಯವಿಲ್ಲದೆ ಮುಂದೆ ಬಂದು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಸಹಾಯವಾಣಿ ಸುಲಭವಾಗುತ್ತದೆ ಎಂದು ವಕೀಲ ಮಂಜುನಾಥ್ ಹೇಳಿದ್ದಾರೆ.
ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಅನನ್ಯ ಭಟ್ 2003 ರಲ್ಲಿ ಧರ್ಮಸ್ಥಳಕ್ಕೆ ಕಾಲೇಜು ಪ್ರವಾಸಕ್ಕೆಂದು ಬಂದವರು ನಾಪತ್ತೆಯಾಗಿದ್ದರು. ಅನನ್ಯ ಭಟ್ ತಾಯಿ ಸುಜಾತಾ ಜುಲೈ 15 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
