March 20, 2026
WhatsApp Image 2025-08-23 at 11.28.13 AM

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ.

ಇದೀಗ ಮಾಸ್ಕ್ ಮ್ಯಾನ್ ಹೆಸರು ಮತ್ತು ಫೋಟೋವನ್ನು ಎಸ್ಐಟಿ ಅಧಿಕಾರಿಗಳು ಕೊನೆಗೂ ರಿವಿಲ್ ಮಾಡಿದ್ದಾರೆ. ಮಾಸ್ಕ್​ಮ್ಯಾನ್​ ಹೆಸರು ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದ್ದು, ಆತನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಹಾಜರುಪಡಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.