ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯ– ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ ಎಂದ ಎಸ್ಪಿ

ಡುಪಿ: ಇಲ್ಲಿನ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. “ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ.

ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು. ಪ್ರವೀಣ್ – ಅಯ್ನಾಝ್ ಗೆ ಹಲವಾರು ಸಹಾಯ ಮಾಡಿದ್ದಾರೆ. ಆದರೆ ಒಂದು ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್ ಪೊಸೆಸಿವ್ ನೆಸ್ ನಿಂದ ಕೊಲೆ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಿಕೊಂಡಿದ್ದ” ಎಂದು ಮಾಹಿತಿ ನೀಡಿದರು.

ಪ್ರವೀಣ್ ಅಂದು ಆರಂಭದಲ್ಲಿ ಅಯ್ನಾಝ್ ಗೆ ಮೊದಲು ದಾಳಿ ಮಾಡುತ್ತಾನೆ. ಹಸೀನಾ, ಅಫ್ನಾನ್, ಆಸಿಂ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬಳಿಕ ಬೇರೆ ಬೇರೆ ವಾಹನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾನೆ. ಕೈ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ ಇಟ್ಟು ಹೆಂಡತಿ ತವರು ಮನೆಗೆ ಹೋಗಿದ್ದಾನೆ. ಕೈಗೆ ಗಾಯವಾಗಿದೆ ಎಂಬ ಬಗ್ಗೆ ಪತ್ನಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾನೆ ಎಂದರು.

ಕ್ರಿಮಿನಲ್ ಹಿಸ್ಟರಿಯಿಲ್ಲ: ನಾವು ಎಲ್ಲಾ ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲ. 2007 ಪೂನಾ ಪೊಲೀಸ್ ಆಗಿದ್ದ, ಉತ್ತಮ ಸಂಬಳಕ್ಕಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸೇರಿದ್ದಾನೆ. ಅಮಲು ಪದಾರ್ಥ ಸೇವನೆ ಮಾಡಿದ್ದಾನೋ ಎಂಬ ಬಗ್ಗೆ ಮೆಡಿಕಲ್ ವರದಿ ಬರಲಿದೆ ಎಂದರು.

ಕುಡುಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ವ್ಯಕ್ತಿಯ ವಿಚಾರಣೆ ಮಾಡಿದ್ದೇವೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯುತ್ತೇವೆ. ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ ಆಗಿದೆ. ಗಂಭೀರ ಪ್ರಕರಣವಾಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಎಸ್.ಪಿ ಹೇಳಿದರು.

ಹಸೀನಾ ಗೆ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇವೆ. ಅಯ್ನಾಝ್ ಕುಟುಂಬ ಫ್ಯಾಮಿಲಿ ತನಿಖೆಗೆ ಬಹಳ ಸಹಕಾರ ಕೊಟ್ಟಿದ್ದಾರೆ. ನೂರ್ ಮೊಹಮ್ಮದ್ ಕುಟುಂಬ ಬಹಳ ನೋವಲ್ಲಿದ್ದಾರೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತವೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಗ್ಗೆ ಕುಟುಂಬ ಮನವಿ ನೀಡಿದೆ ಎಂದರು. ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ನಾಲ್ವರ ಕೊಲೆ ಪ್ರಕರಣ ದೊಡ್ಡ ಸವಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾದ ಪ್ರಕರಣ ಇದಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ. ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ಕೊಡುವ ಬಗ್ಗೆ ಶಿಫಾರಸ್ಸು ಮಾಡಿದ್ದೇನೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ ಹೇಳಿದರು.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.