ಪುತ್ತೂರು : ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ..!

ಪುತ್ತೂರು : ಫೆಬ್ರವರಿ ತಿಂಗಳಲ್ಲಿ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎಂಬ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ  ಆರೋಪಿ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಈಶ್ವರಿ (45) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಆಕೆ ಕಳವು ನಡೆಸಿದ ಸುಮಾರು ರೂ. 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ರವರು ಭಾಗವಹಿಸಿರುತ್ತಾರೆ.

Check Also

ಮಂಗಳೂರು: ಮತಗಟ್ಟೆಗಳಲ್ಲಿ ವರ್ಣ ಚಿತ್ತಾರ

ಎಲ್ಲೆಡೆ ಚುನಾವಣೆ ಕಾವು ಹೆಚ್ಚಾಗುತ್ತಾ ಇದೆ. ಇತ್ತ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮಂಗಳೂರು ತಾಲೂಕು …

Leave a Reply

Your email address will not be published. Required fields are marked *

You cannot copy content of this page.