ಕಾರ್ಕಳ: ಅನ್ಯಕೋಮಿನ ಮೂವರು ಯುವಕರಿಂದ ಹಿಂದೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..!

ಕಾರ್ಕಳ: ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿ. ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಸಂತ್ರಸ್ತೆ ಯುವತಿ ಕುಕ್ಕುಂದೂರಿನ ಅಯ್ಯಪ್ಪ ನಗರದ ನಿವಾಸಿ. ಮನೆಯ ಪಕ್ಕದ ರಂಗನಪಲ್ಕೆ ಎಂಬ ಸ್ಥಳಕ್ಕೆ ಕರೆದೊಯ್ದು ಹಾಡಿಯಲ್ಲಿ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಆರಂಭದಲ್ಲಿ ಯುವತಿಗೆ ಮದ್ಯ ಹಾಗೂ ಇತರ ಮಾದಕ ಪದಾರ್ಥ ನೀಡಿ ಓರ್ವ ಅತ್ಯಾಚಾರ ಎಸಗಿದ್ದು, ಬಳಿಕ ಮತ್ತಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ.ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Check Also

ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು

ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …

Leave a Reply

Your email address will not be published. Required fields are marked *

You cannot copy content of this page.