March 22, 2026
WhatsApp Image 2025-10-24 at 10.54.35 AM

ಬೆಳ್ತಂಗಡಿ: ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿ ಅಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅ.23 ರಂದು ಮಧ್ಯಾಹ್ನ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ ಆಟೋ ರಿಕ್ಷಾದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ನಡೆಸುತ್ತಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಲಾಯಿಲ ಜಂಕ್ಷನ್ ನಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ (27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ ಪತ್ತೆಯಾಗಿದ್ದ 85 ಕೆ.ಜಿ ಗೋಮಾಂಸ ಮತ್ತು 2,50,000 ಲಕ್ಷ ರೂ. ಮೌಲ್ಯದ ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.