ದ.ಕ ಜಿಲ್ಲೆಯತ್ತ ಗಮನ ನೀಡ್ತೇನೆ, ಮತ್ತೆ ಆಶೀರ್ವಾದ ಮಾಡಿ ಎಂದ ಸಂಸದ ನಳಿನ್

ಬಂಟ್ವಾಳ: ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೆ ಲೋಕಸಭೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಂಟ್ವಾಳದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾವುಕ ನುಡಿಗಳನ್ನಾಡಿದ ಅವರು, ನನ್ನ ವಿರುದ್ಧದ ಹಲವು ಟೀಕೆ, ಟಿಪ್ಪಣಿಯನ್ನ ಕೇಳಿದ್ದೇನೆ. ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ.ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ. ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಹಲವು ನೋವನ್ನ ಅನುಭವಿಸಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ. ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ. ನನಗೂ ದುಃಖವಿದೆ. ಸಂಸದನಾದ ಬಳಿಕ ಹಳ್ಳಿ ಹಳ್ಳಿಗಳಿಗೆ ಬರಲು ಆಗಲಿಲ್ಲ.

ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇಡೀ ರಾಜ್ಯದ ಜವಾಬ್ದಾರಿಯಿತ್ತು. ಪ್ರಾಮಾಣಿಕವಾಗಿ ಬಿಜೆಪಿಯನ್ನ ಹಳ್ಳಿ ಹಳ್ಳಿಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಆದರೆ ನೀವು ತಲೆ ತಗ್ಗಿಸುವ ರೀತಿಯ ಕೆಲಸ ಮಾಡಲಿಲ್ಲ. ಈಗ ಮತ್ತೆ ನಾನು ದಕ್ಷಿಣ ಕನ್ನಡ ಜಿಲ್ಲೆಯತ್ತ ಗಮನ ನೀಡುತ್ತೇನೆ.

ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಇನ್ನೂ ಉಳಿದಿರುವ 6 ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆ. ಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.