March 10, 2026
WhatsApp Image 2024-04-25 at 10.21.31 AM

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಸೇರಿ 8 ಜನ ಮಂಡ್ಯ ಜಿಲ್ಲೆಯ ಮೇಲುಕೋಟೆಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯ‌ರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.