ಬೆಳ್ತಂಗಡಿ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಯವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಭಕ್ತರಿಂದ ಮೋದಿ ಪರ ಘೋಷಣೆ, ಜೈಶ್ರ್ರೀರಾಂ ಘೋಷಣೆ ಕೇಳಿ ಬಂದಿತು. ಸಿಎಂ, ಡಿಸಿಎಂ ದೇವಸ್ಥಾನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅವಧಿಗೂ ಮುನ್ನವೇ ಭಕ್ತರ ದೇವರ ದರ್ಶನ ಬಂದ್ ಮಾಡಲಾಗಿತ್ತು. ಒಂದು ಗಂಟೆಗೂ ಅಧಿಕ ಸಮಯದಿಂದ ದೇವರ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಆದ್ದರಿಂದ ಸಾವಿರಾರು ಮಂದಿ ಭಕ್ತರು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತ್ತು. ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಸಿಎಂ, ಡಿಸಿಎಂ ಬಂದು ದೇವಸ್ಥಾನ ಪ್ರವೇಶಿಸುತ್ತಿದ್ದಂತೆ ಜೈಶ್ರೀರಾಂ, ಮೋದಿ ಪರ ಘೋಷಣೆ ಕೂಗಿದರು. ಅಲ್ಲದೆ, ಅಬ್ ಕಿ ಬಾರ್ ಮೋದಿ ಸರ್ಕಾರ್ ಎಂದು ಘೋಷಣೆ ಕೂಗಿದರು.