ಬೆಳ್ತಂಗಡಿ: ಬೆಳಾಲು ಎಂಬಲ್ಲಿ ನಿವೃತ್ತ ಶಿಕ್ಷಕನ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಕಾಸರಗೋಡು ಮುಳ್ಳೇರಿಯ ನಿವಾಸಿ ರಾಘವೇಂದ್ರ ಕೆದಿಲಾಯ(52), ಮುರಳೀಕೃಷ್ಣ (20) ಎಂದು ಗುರುತಿಸಲಾಗಿದೆ.
ಆಗಸ್ಟ್ 20 ರಂದು ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡಕ್ಕಿಲ್ಲಾಯ (83) ಎಂಬವರನ್ಮು ಕಡಿದು ಕೊಲೆಮಾಡಲಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು, ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ ವೇಳೆ ಇಬ್ಬರು ಬಾಯಿಬಿಟ್ಟಿದ್ದಾರೆ.
ಬಂಧಿತ ಆರೋಪಿಗಳಲ್ಲಿ ಓರ್ವನ ಮೇಲೆ ಕೇರಳದ ಬದಿಯಡ್ಕ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳ ಬಂಧನ ಬಾಕಿ ಇದೆ.