March 21, 2026
WhatsApp Image 2025-10-25 at 9.23.10 AM

ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣವನ್ನು ಬೇಧಿಸಲಾಗಿರುತ್ತದೆ.

ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದು ಆರೋಪಿಗಳಾದ ಸುಶಾಂತ್ @ ಕಡವಿ(29), ತಂದೆ: ಆನಂದ, ವಾಸ: ಕಟ್ಲ ಮನೆ, ಕಾನ ಸುರತ್ಕಲ್, ಕೆ ವಿ ಅಲೆಕ್ಸ್(27), ತಂದೆ: ವರ್ಗೀಸ್, ವಾಸ: ಬೈಕಲ ಮನೆ, ಕಾನ ಕಟ್ಲ, ಇಡ್ಯಾ ಗ್ರಾಮ, ನಿತಿನ್(26), ತಂದೆ: ಮಂಕು ಕುಲಾಲ್ ವಾಸ: ಶಿವಕೃಪಾ ಇಂದಿರಾ ಕಟ್ಟೆ, ಸುರತ್ಕಲ್ ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟ ಆರುಣ್ ಶೆಟ್ಟಿ(56), ತಂದೆ: ದಿ: ಡಿ ಸುರೇಂದ್ರನಾಥ, ವಾಸ: ವಿದ್ಯಾನಗರ ರಸ್ತೆ, ಕುಳಾಯಿಗುಡ್ಡೆ ಹೊನ್ನಕಟ್ಟೆ ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಈ ಪೈಕಿ ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿತರ ಪತ್ತೆಯ ರವಿಶಂಕರ್ ಉಪ ಪೊಲೀಸ್ ಆಯುಕ್ತರ ನಿರ್ದೇಶನದಂತೆ, ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ರವರಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ, ಹಾಗೂ ಸಿಬ್ಬಂದಿ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತಿಕ್ ವಿನೋದ್ ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ ಎ ಎಫ್ ತಂಡದವರು ಮತ್ತು ಶ್ವಾನ ದಳದವರು ಆರೋಪಿಗಳ ಪತ್ತೆಯ ಬಗ್ಗೆ ಹಾಗೂ ತನಿಖೆಯ ಬಗ್ಗೆ ಭಾಗವಹಿಸಿರುತ್ತಾರೆ.

About The Author

Leave a Reply

Your email address will not be published. Required fields are marked *

You cannot copy content of this page.