ಉಡುಪಿ: ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ (67) ಜ.26 ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕಲ್ಪನಾ ಚಿತ್ರಮಂದಿರ ಬಳಿ ಇರುವ ಮಿತ್ರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಡಾ.ಶ್ರೀಧರ ಹೊಳ್ಳ ಡಿ.17 ರಂದು ತಮ್ಮ ಮನೆಯಲ್ಲಿ ಕುಸಿದು ಬಿದ್ದಿದ್ದರು. ಮೆದುಳಿನ ಕಾಯಿಲೆಗೆ ತುತ್ತಾಗಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಐಸಿಯುನಲ್ಲಿ 40 ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.