ಉಡುಪಿ: ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ ನಿಧನ

ಡುಪಿ: ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ (67) ಜ.26 ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕಲ್ಪನಾ ಚಿತ್ರಮಂದಿರ ಬಳಿ ಇರುವ ಮಿತ್ರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಡಾ.ಶ್ರೀಧರ ಹೊಳ್ಳ ಡಿ.17 ರಂದು ತಮ್ಮ ಮನೆಯಲ್ಲಿ ಕುಸಿದು ಬಿದ್ದಿದ್ದರು. ಮೆದುಳಿನ ಕಾಯಿಲೆಗೆ ತುತ್ತಾಗಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಐಸಿಯುನಲ್ಲಿ 40 ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Check Also

ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ …

Leave a Reply

Your email address will not be published. Required fields are marked *

You cannot copy content of this page.