ಕುಂದಾಪುರ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಮೂಲತಃ ಬೈಂದೂರು ಸಮೀಪದ ನಾಗೂರಿನ ಹಾಗೂ ಪ್ರಸಕ್ತ ಕುಂದಾಪುರ ನಿವಾಸಿಯಾಗಿದ್ದ ಮುಹಮ್ಮದ್ ಫರ್ವೇಝ್(37) ಎಂದು ಗುರುತಿಸಲಾಗಿದೆ. ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಇವರು, ಉತ್ತಮ ಕ್ರೀಡಾಪಟುವಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.