ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ಮನೆಯ ಮೂವರು ಮಹಿಳೆಯರು ನ್ಯಾಯಾಧೀಶರಾಗಿದ್ದಾರೆ. ಹೈಕೋರ್ಟ್ ಅಧಿಸೂಚನೆಗೊಳಿಸಿದ 33 ಸಿವಿಲ್ ನ್ಯಾಯಾಧೀಶರ ಆಯ್ಕೆ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಹೆಚ್.ಜೆ. ಶ್ರೇಯಾ ಅವರು ಆಯ್ಕೆಯಾಗಿದ್ದಾರೆ. ಶ್ರೇಯಾ ಮೂಲತಃ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕು ಹೆಗಡೆ ಗ್ರಾಮದವರು. ಅವರ ತಂದೆ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜೆ. ನಾಯ್ಕ, ತಾಯಿ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರೂಪಾ ನಾಯ್ಕ. ಶ್ರೇಯಾ ಅವರ ಸಹೋದರಿ ಹೆಚ್.ಜೆ. ಶಿಲ್ಪಾ 2019ರ ಬ್ಯಾಚ್ ನಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದು. ಮಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Check Also
ಮಂಗಳೂರು: ಪಿಎಂ ಇಜಿಪಿ, ಮುದ್ರಾಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಸಂಸದ ಬ್ರಿಜೇಶ್ ಚೌಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂ ಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು …