ಮೂಡುಬಿದಿರೆ : ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ಕಾಣೆಯಾದ ವಿದ್ಯಾರ್ಥಿನಿ.
ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದ್ದು, ಸದ್ಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ, ವಿದ್ಯಾರ್ಥಿನಿ ತನ್ನ ಪ್ರಿಯಕರನ ಜೊತೆ ಮದುವೆಯಾಗಿದ್ದಾಳೆ ಎನ್ನಲಾಗಿದೆ.