ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿದಿ ವಿಧಾನಗಳು ಜರಗಿತು.
ಬೆಳಗ್ಗೆ 6-45 ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನಡೆಯಲಿರುವುದು. ಬಳಿಕ ನ್ಯಾಸಪೂಜೆ ಪ್ರಸನ್ನಪೂಜೆ ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು.
ಸುಮಾರು 15 ಸಾವಿರ ಮಂದಿ ಭಕ್ತರು ಪಾಲ್ಗೊಂಡಿದ್ದು ಅನ್ನಪ್ರಸಾದವನ್ನು ಸ್ವೀಕರಿಸಿದರು. ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್, ಅಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ. ಅಮೀನ್, ಪವಿತ್ರಪಾಣಿ ಶಂಕರನಾರಾಯಣ ಐತಾಳ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಉಪಾಧ್ಯಕ್ಷ ರಮೇಶ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು ಕಾರ್ಯದರ್ಶಿ ಜನಾರ್ದನ್ ಕೊಡವೂರು, ಹಾಗೂ ಅಭಿವೃದ್ಧಿ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಭಕ್ತವೃಂದ, ಗುರಿಕಾರರು, ಗ್ರಾಮಸ್ಥರು ಪಾಲ್ಗೊಂಡಿದ್ದರು.