March 26, 2025
WhatsApp Image 2024-04-26 at 5.04.17 PM

ಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ.

ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ. ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್​ಗೆ ಗಾಂಜಾ ವ್ಯಸನಿಯಾಗಿರುವ ಆರೋಪಿ ಚರಣ್ ಚಾಕು ಇರಿದಿದ್ದಾನೆ. ಕೂಡಲೇ ಪವನ್​ನನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.