

ಉಡುಪಿ: ಕೆಲ ದಿನಗಳ ಹಿಂದೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇಪ್ಪತ್ತೈದು ಜನರನ್ನು ಗುಂಡಿಕ್ಕಿ ಕೊಂದ ಈ ದುಷ್ಕೃತ್ಯಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇಶದಲ್ಲಿರುವ ಪಾಕಿಸ್ತಾನಿ ಪ್ರಜೆಗಳಿಗೆ ಇಲ್ಲಿ ಜಾಗವಿಲ್ಲ, ವಾಪಾಸ್ ಕಳಿಸಿ ಎಂಬ ಆದೇಶ ಹೊರಡಿಸಿದ್ದು ಈ ನಿಟ್ಟಿನಲ್ಲಿ ದೇಶದ ಜಿಲ್ಲೆ ಜಿಲ್ಲೆಯೂ ಜಾಗೃತವಾಗುತ್ತಿದೆ.
ಇದಕ್ಕೆ ಸಂಬಂಧಿಸಿ ಮಾಹಿತಿ ಕಲೆ ಹಾಕಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಯಾವುದೇ ನೋಂದಾಯಿತ ಪಾಕಿಸ್ತಾನಿ ಪ್ರಜೆಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.