May 26, 2026
ASM_Dakshina_25052026_1

ಬೆಳ್ತಂಗಡಿ: ಕಾರಿನ ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ ಆನ್ ಆದ ಕಾರಣ ಮಗುವೊಂದು ಕಾರಿನೊಳಗೆ ಸಿಲುಕಿಕೊಂಡ ಆತಂಕಕಾರಿ ಘಟನೆ ನಡೆದಿದ್ದು, ಸಾರ್ವಜನಿಕರು ಸಮಯಪ್ರಜ್ಞೆಯಿಂದ ಮಗುವನ್ನು ಯಶಸ್ವಿಯಾಗಿ ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಡಂತ್ಯಾರಿನ ಮದ್ದಡ್ಕ ಎಂಬಲ್ಲಿ ಭಾನುವಾರ ನಡೆದಿದೆ.

ವರದಿಗಳ ಪ್ರಕಾರ, ಕಾರು ಚಾಲಕ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಸಮೀಪದ ಅಂಗಡಿಯೊಂದಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಆಟೋ-ಲಾಕ್ ವ್ಯವಸ್ಥೆಯು ಇದ್ದಕ್ಕಿದ್ದಂತೆ ಸಕ್ರಿಯಗೊಂಡಿದ್ದು, ಮಗು ಕಾರಿನೊಳಗೆ ಸಿಲುಕಿಕೊಳ್ಳುವಂತಾಗಿದೆ.

ಮಗು ಕಾರಿನೊಳಗೆ ಲಾಕ್ ಆಗಿರುವುದನ್ನು ಕಂಡು ಸ್ಥಳೀಯರು ತಕ್ಷಣವೇ ಜಮಾಯಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಕಾರಿನ ಬಾಗಿಲು ತೆರೆಯಲು ಸತತ ಪ್ರಯತ್ನ ನಡೆಸಿದರೂ ಬಾಗಿಲು ಅನ್‌ಲಾಕ್ ಮಾಡಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಸಾರ್ವಜನಿಕರು ತಕ್ಷಣವೇ ಕಾರಿನ ಕಿಟಕಿಯ ಗಾಜನ್ನು ಒಡೆದು ಒಳಗೆ ಕೈಹಾಕಿ ಬಾಗಿಲು ತೆರೆದು ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

ಇನ್ನು ಘಟನೆ ವೇಳೆ ಮಗುವಿಗೆ ಯಾವುದೇ ಗಾಯಗಳಾಗದೆ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಈ ಮೂಲಕ ಕೆಲಕಾಲ ಸೃಷ್ಟಿಯಾಗಿದ್ದ ಆತಂಕದ ವಾತಾವರಣದಿಂದ ನಿಟ್ಟುಸಿರು ಬಿಡುವಂತಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.