ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡರವರ ಪುತ್ರಿ ವಿದ್ಯಾ(22 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ(25) ಸಂಜೆ ವರದಿಯಾಗಿದೆ.
ಮನೆಯಲ್ಲಿಯೇ ಇರುತ್ತಿದ್ದ ಇವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.