March 21, 2026
WhatsApp Image 2024-10-26 at 11.51.30 AM

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಿಲುಗಡೆ ಪಡೆದ ರೈಲಿನ ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಆತ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ರೈಲು ಪ್ಲಾಟ್‌ ಫಾರ್ಮ್ ಸಂಖ್ಯೆ ಒಂದರಲ್ಲಿ ನಿಲುಗಡೆ ಪಡೆದಿತ್ತು. ಸ್ಥಳ ಸಂಖ್ಯೆ 23 ರಲ್ಲಿದ್ದ ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಡಾ. ಸ್ಟೀವನ್‌ ಜಾರ್ಜ್‌ ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವು ಪಡೆದಿದ್ದರು.

ರೈಲ್ವೇ ಇನ್‌ಸ್ಪೆಕ್ಟರ್‌ ಮಧುಸೂದನ್‌ ಸಮಕ್ಷಮದಲ್ಲಿ ಯೋಗೀಶ್‌, ಗಣೇಶ್‌, ಮಂಜುನಾಥ, ಶ್ರೀಲತಾ ಅವರ ಸಹಕಾರದಿಂದ ಬೋಗಿಯೊಳಗಿನಿಂದ ವ್ಯಕ್ತಿಯನ್ನು ಹೊರ ತಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಪರೀಕ್ಷಿಸಿ ಆತ ಮೃತಪಟ್ಟಿರುವುದಾಗಿ ತಿಳಿಸಿದರು. ಮೃತದೇಹವನ್ನು ಆಸ್ಪತ್ರೆಯ ಶವ ರಕ್ಷಣಾ ಕೇಂದ್ರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ ವಾರೀಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಬಹುದು.

About The Author

Leave a Reply

Your email address will not be published. Required fields are marked *

You cannot copy content of this page.