December 26, 2024
WhatsApp Image 2024-12-26 at 9.50.49 AM
ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ ಪಡೆದು ಅಂತಿಮ ನಮನ ಸಲ್ಲಿಸಿದರು.
ಕೆಲವೇ ಕ್ಷಣಗಳಲ್ಲಿ ಉಡುಪಿ ನಗರದಿಂದ ಕುಂದಾಪುರಕ್ಕೆ ಮೃತದೇಹ ರವಾನೆಯಾಗಲಿದೆ ಎಂದು ಹೇಳಲಾಗಿದೆ. ಬೀಜಾಡಿ ಪಡು ಸರ್ಕಾರಿ ಶಾಲಾ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ ನಡೆಸಲಾಗಿದೆ. ಬೀಜಾಡಿ ಕಡಲ ಕಿನಾರೆಯಲ್ಲಿ ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಕಳೆದ 13 ವರ್ಷಗಳಿಂದ ಸೇನೆಯಲ್ಲಿರುವ ಅನೂಪ್ 33ನೇ ವಯಸ್ಸಿಗೆ ಹವಾಲ್ದಾರ್ ಆಗಿ ಭಡ್ತಿ ಹೊಂದಿದ ವೀರ ಯೋಧರಾಗಿದ್ದಾರೆ. ಬಡತನದ ನಡುವೆ ಭಾರತಾಂಬೆಯ ಸೇವೆ ಮಾಡಬೇಕೆಂದು ಹಠದಿಂದ ಸೈನ್ಯ ಸೇರಿದ್ದ ಅನೂಪ್ 14 ವರ್ಷ ಸೇವೆ ಸಲ್ಲಿಸಿದ್ದಾರೆ. 2022ರಲ್ಲಿ ಅನೂಪ್‌ಗೆ ವಿವಾಹವಾಗಿತ್ತು. ಎರಡು ವರ್ಷದ ಪುಟ್ಟ ಮಗುವಿದ್ದು, ಇಬ್ಬರು ಸಹೋದರಿಯರು, ಅಪಾರ ಬಂಧು ಮಿತ್ರರು, ಗ್ರಾಮಸ್ಥರು, ಗೆಳೆಯರನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಕುಟುಂಬಸ್ಥರ ಆಕ್ರಂದಣ ಮುಗಿಲು ಮುಟ್ಟಿದೆ.

About The Author

Leave a Reply

Your email address will not be published. Required fields are marked *

You cannot copy content of this page.