ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲಾ (45) ಮೃತ ಪಟ್ಟವರು. ಇವರು ದ್ವಿಚಕ್ರವಾಹನದಲ್ಲಿ ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ಬಂದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ ಎನ್ನಲಾಗಿದೆ. ಕಮಲಾ ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಕಮಲಾ ಸೋಮವಾರ ಸಂಜೆ ಮೃತಪಟ್ಟಿದ್ದಾರೆ.