ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ಮೂಡನಿಡಂಬೂರು ಎಂಬಲ್ಲಿ ಮನೆಯ ಚಿನ್ನಾಭರಣ ಕಳ್ಳತನ ಮಾಡಿದ್ದ ಕುಖ್ಯಾತ ಮನೆಗಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.ಮಂಗಳೂರು ನಿವಾಸಿ ಆರಿಫ್ (37) ಬಂಧಿತ ಆರೋಪಿ.ಈತ ಶಿರಿಬೀಡು ವಾರ್ಡ್ ನ ಕಾಡಬೆಟ್ಟು ಎಂಬಲ್ಲಿ ಮನೆಯ ಬಾಗಿಲನ್ನು ಮುರಿದು ದೇವರ ಪೋಟೋ ಮೇಲಿದ್ದ ಸುಮಾರು ತಲಾ ಒಂದು ಗ್ರಾಂ ತೂಕವಿರುವ 7 ಚಿನ್ನದ ಲಕ್ಷ್ಮೀ ಪದಕವಿರುವ ಮಾಲೆಯನ್ನು ಕಳ್ಳತನ ಮಾಡಿದ್ದ.ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಶ್ರೀಧರ್ ವಿ ಸತಾರೆ ನೇತೃತ್ವದಲ್ಲಿ ಪಿಎಸ್‌ಐ ಈರಣ್ಣ ಶಿರಗುಂಪಿ , ಸಿಬ್ಬಂದಿಯವರಾದ ಹೆಚ್ ಸಿ ಸುರೇಶ್, ಪಿಸಿ ಆನಂದ ಎಸ್., ಪಿಸಿ ಹೇಮಂತ್‌ಕುಮಾರ್ ಹಾಗೂ ಪಿಸಿ ಎಂ.ಆರ್. ಶಿವಕುಮಾರ್ ರವರನ್ನು ಒಳಗೊಂಡ ತಂಡವು ಬಂಧಿಸಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಹಿರೋ ಹೊಂಡಾ ಬೈಕ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಕಳವು ಮಾಡಿದ್ದ ಒಟ್ಟು ರೂ. 35964 ಮೌಲ್ಯದ 5.400 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಕಳವು ಮಾಡಲು ಬಳಸಿದ ಹಿರೋ ಬೈಕ್ ಅಂದಾಜು ಮೌಲ್ಯ 25000 ರೂ. ಮತ್ತು ಕಬ್ಬಿಣದ ರಾಡ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕ್ಕೂ ಹೆಚ್ಚೂ ಪ್ರಕರಣಗಳು ದಾಖಲಾಗಿವೆ.
Check Also
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …