ಬೆಳ್ತಂಗಡಿ :ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆ ಯುವ ‘ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆ’ಯಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು ‘ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ವಿಭಾಗ’ದಲ್ಲಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದೆ. ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮದ ಮೂಲಕ ಸುಸ್ಥಿರ ಅಭಿವೃದ್ಧಿ ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ‘ಬೆಸ್ಟ್ ಟೂರಿಸಂ. ವಿಲೇಜ್ ಕಾಂಫಿಟೇಶನ್-2024’ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾಪಂ ವ್ಯಾಪ್ತಿಯ ಕುತ್ಲೂರು ಕlನಿವಾಸಿ ಗಳಾದ ಹರೀಶ್ ಡಿ. ಸಾಲ್ಯಾನ್, ಶಿವರಾಜ್ ಮತ್ತು ಸಂದೀಪ್ ಪೂಜಾರಿ ನಾರಾವಿ ಇವರು ಕುತ್ಲೂರು ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿ ಸೊಬಗಿನ ಬಗ್ಗೆ ಡ್ಯಾಕುಮೆಂಟರಿ ತಯಾರಿಸಿ ಸ್ಪರ್ಧಾ ನಿಯಮದಂತೆ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿದ್ದರು. ಈ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಮಂತ್ರಾಲಯ ಪಡೆದುಕೊಂಡಿತ್ತು. ಅಂತಿಮವಾಗಿ ‘ಅತ್ಯುತ್ತಮ ಪ್ರವಾಸಿ ಹಳ್ಳಿಗಳು’ ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮ ಆಯ್ಕೆಯಾಗಿದೆ ಸೆ.27ರಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ಜರುಗುವ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ಸಮಾರಂಭ ನಡೆಯಲಿದೆ. ಉಪರಾಷ್ಟ್ರಪತಿ ಜಗದೀಪ್ ಧರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ ಸಚಿವರ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಡ್ಯಾಕುಮೆಂಟರಿ ಮಾಡಿದ್ದ ಹರೀಶ್ ಡಿ. ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.