March 18, 2026
WhatsApp Image 2024-12-27 at 9.01.12 AM

ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ 3ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಈ ಹೊಂಡಕ್ಕೆ ಮಗುಚಿಬಿದ್ದಿದೆ

About The Author

Leave a Reply

Your email address will not be published. Required fields are marked *

You cannot copy content of this page.