ಮಂಗಳೂರು: ಕಾಪಿಕಾಡ್‌ನ ಅಪಾರ್ಟ್‌ಮೆಂಟ್ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ.
ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು.ಇನ್ನು ಶನಿವಾರ ಬೆಳಗ್ಗೆ ದಿನೇಶ್ ಪತ್ನಿಯನ್ನು ಕೊಂದು ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.