ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿಲ್ಪಾ ಪ್ರಸನ್ನ(40) ಎಂಬ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ಮರುಳುವಾಗ ಮರವಂತೆಯಲ್ಲಿ ಕಾರು ಮತ್ತು ಬೈಕ್ ಅಪಘಾತದಲ್ಲಿ ಶಿಕ್ಷಕಿ ಸಾವನ್ನಪ್ಪಿದ್ದಾರೆ. ತಲೆಗೆ ತೀವ್ರ ಏಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕರಿಯಾಗದೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು.
ಮರವಂತೆಯ ಸರ್ಕಾರಿ ಪ್ರೌಢಶಾಲೆ ಶಾಲೆಯಲ್ಲಿ ಉತ್ತಮ ಹಿಂದಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು, ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಲ್ಪಾ ಮನೆಯವರು ಅಂಗಾಂಗವನ್ನು ದಾನಕ್ಕೆ ನಿರ್ಧರಿಸಿ ಆರು ಜನರ ಬಾಳಿಗೆ ಬೆಳಕಾಗಿದ್ದಾರೆ. ಹೀಗೆ ದಾನ ಮಾಡಿದ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು ಒಟ್ಟು ಆರು ಜನರ ಜೀವ ಉಳಿಸಲು ಸಹಾಯ ಮಾಡಿತು ಎಂದು ವೈದ್ಯರು ತಿಳಿಸಿದ್ದಾರೆ. ಜೀವನ ಸಾರ್ಥಕತೆ ಪ್ರೋಟೋಕಾಲ್‌ಗಳು ಮತ್ತು ನಿರ್ಧಾರಗಳ ಪ್ರಕಾರ, ಯಕೃತ್‌ನ್ನು ಬೆಂಗಳೂರಿನ ಅಸ್ಟರ್ ಸಿಎಂಐ ಆಸ್ಪತ್ರೆಗೆ, ಒಂದು ಮೂತ್ರಪಿಂಡ ವನ್ನು ಮಂಗಳೂರಿನ ಎ.ಜೆ.ಆಸ್ಪತ್ರೆ ಹಾಗೂ ಎರಡು ಕಾರ್ನಿಯಾಗಳು, ಒಂದು ಮೂತ್ರಪಿಂಡ ಹಾಗೂ ಚರ್ಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು. ‘ಅಂಗದಾನ ಒಂದು ಪುಣ್ಯದ ಕೆಲಸ. ಶಿಲ್ಪಾ ಅವರು ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಎಂದು ಪ್ರಸನ್ನ ಕುಮಾರ್ ಮತ್ತವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲ, ಸಹಕಾರದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ ಎಂದು ಡಾ.ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ಮಕ್ಕಳ ನೆಚ್ಚಿನ ಶಿಕ್ಷಕಿಯಾಗಿದ್ದರು ಶಿಲ್ಪಾ: ಶಿಲ್ಪಾ ಮಾಧವ ಅವರು ಎರಡು ದಶಕಗಳಿಂದ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತಿದ್ದರು. ಕಳೆದ ಶನಿವಾರ ಅಪರಾಹ್ನ ತಾನು ಕೆಲಸ ಮಾಡುತ್ತಿದ್ದ ಮರವಂತೆ ಸರಕಾರಿ ಪ್ರೌಢ ಶಾಲೆಯಿಂದ ಸ್ಕೂಟರ್‌ನಲ್ಲಿ ಮನೆಗೆ ಬರುತಿದ್ದಾಗ ಅಪಘಾತ ನಡೆದಿತ್ತು. ಮರವಂತೆ ಸಮೀಪವೇ ಕಾರೊಂದು ಅವರ ಇಲೆಕ್ಟ್ರಿಕ್ ಸ್ಕೂಟರ್‌ಗೆ ಢಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಕಾರಿನ ಚಾಲಕ ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಅವರನ್ನು ಮಣಿಪಾಲಕ್ಕೆ ವರ್ಗಾಯಿಸಲಾಗಿತ್ತು. ಶಿಲ್ಪಾ ಮಾಧವ ಅವರು ಸಮಾಜ ಸೇವಕ ಪತಿ ಪ್ರಸನ್ನ ಕುಮಾರ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.