ಉಡುಪಿ: ನಗರದ ಹಿರಣ್ಯ ಫೈನಾನ್ಸ್ ಹಿಂಭಾಗದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಶಂಕಿಸಲಾಗಿದೆ. ಮರಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.
ಘಟನಾ ಸ್ಥಳದಲ್ಲಿದ್ದು ಎಸ್ಐ ಪುನೀತ್ ಕುಮಾರ್, ತನಿಖಾ ಸಹಾಯಕಿ ನೇತ್ರಾವತಿ, ಹೆಡ್ ಕಾನ್ಸ್ಟೇಬಲ್ ಆಶಾಲತಾ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ನೆರವಾದರು.