March 4, 2026
bank-fire

ಮಂಗಳೂರು : ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು  (ಫೆ. 28) ಸಂಭವಿಸಿದೆ.

ಶಾರ್ಟ್ ಸರ್ಕೀಟ್‌ನಿಂದ ಬ್ಯಾಂಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ದಟ್ಟ ಹೊಗೆಯ ವಾತವರಣ ನಿರ್ಮಿತವಾಗಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರ ಬಂದಿದ್ದಾರೆ. ಮಧ್ಯಾಹ್ನವಾದ್ದರಿಂದ ಗ್ರಾಹಕರ ಸಂಖ್ಯೆಯೂ ಕಡಿಮೆ ಇತ್ತು. ಹಾಗಾಗಿ ಭಾರೀ ಅನಾಹುತ ತಪ್ಪಿದೆ. ಆದರೂ, ಈ ಬೆಂಕಿ ಅವಘಡದ ಪರಿಣಾಮವಾಗಿ ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಸುಟ್ಟುಹೋಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಅಗ್ನಿ ಶಾಮಕ ದಳದ ಸಿಬಂದಿ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ

About The Author

Leave a Reply

Your email address will not be published. Required fields are marked *

You cannot copy content of this page.