February 28, 2026
WhatsApp Image 2025-09-24 at 9.43.36 AM

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೋಳ ನಿವಾಸಿ ಅಮರನಾಥ್ ಪೂಜಾರಿ(21) ಬಂಧಿತ ಆರೋಪಿ. ೧೬ವರ್ಷ ಪ್ರಾಯದ ಬಾಲಕಿ ಫೆ.೨೫ರಂದು ಶಾಲೆ ಮುಗಿಸಿ ಮನೆಗೆ ತೆರಳಿದ್ದಾಗ ಅಮರನಾಥ್, ಮನೆಗೆ ಬಿಡುವುದಾಗಿ ನಂಬಿಸಿ ಆಕೆಯನ್ನು ಕರೆದು ಕೊಂಡು ಬಂದನು. ಬಳಿಕ ದಾರಿ ಮಧ್ಯೆ ಆಕೆಗೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದನು. ಆಗ ಆಕೆ ಅಲ್ಲಿಂದ ತಪ್ಪಿಸಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಕ್ಷಣ ಕಾರ್ಯಪ್ರವೃತರಾದ ಪೊಲೀಸರು ಫೆ.೨೬ರಂದು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.