March 19, 2026
WhatsApp Image 2025-05-28 at 10.28.13 AM
ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಯುವಕನೋರ್ವವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೌದು ಯುವಕನ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.