March 20, 2026
WhatsApp Image 2025-05-28 at 10.35.04 AM

ದಕ್ಷಿಣಕನ್ನಡ : ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ವರುಣಾರ್ಭಟದಿಂದ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದ್ದು ಹಲವು ಜನರು ಮಹಾಮಳೆಗೆ ಬಲಿಯಾಗಿದ್ದಾರೆ. ಈಗ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೌದು ಮಳೆಗೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮೀನುಗಾರರ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದಾರೆ. ಅಲ್ಲದೆ ಪ್ರವಾಸಿಗರು ಮತ್ತು ಸಮುದ್ರ ತೀರ ಮತ್ತು ಚಾರಣಕ್ಕೆ ಹೋಗದಂತೆ ನಿರ್ಬಂಧ ವಿಧಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.