ಮಣಿಪಾಲ: ಹೊತ್ತಿ ಉರಿದ ಕಾರು- ತಪ್ಪಿದ ಅನಾಹುತ

ಣಿಪಾಲ: ಕಾರೊಂದು ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ತಡರಾತ್ರಿ ಸುಮಾರು 1.35ಕ್ಕೆ ಸಂಭವಿಸಿದೆ.

ಕುಂದಾಪುರದಿಂದ ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಪೈಕಿಯವರ ಕಾರು ಎಂದು ತಿಳಿದು ಬಂದಿದೆ.

ಇಬ್ಬರು ವ್ಯಕ್ತಿಗಳು ರಸ್ತೆ ಬದಿ (ಪರ್ಕಳದಿಂದ ಮಣಿಪಾಲಕ್ಕೆ ಬರುವ ರಸ್ತೆಯಲ್ಲಿ MIT ಬಸ್ ನಿಲ್ದಾಣಕ್ಕಿಂತ ಸ್ವಲ್ಪ ಕೆಳಗೆ ಇಳಿಜಾರಿನಲ್ಲಿ) ಕಾರನ್ನು ನಿಲ್ಲಿಸಿ ಒಳಗಡೆ ಮಲಗಿದ್ದರಂತೆ.

ಬೆಂಕಿ ಹತ್ತಿಕೊಂಡದ್ದು ಗೊತ್ತಾದ ತಕ್ಷಣ ಇಬ್ಬರೂ ಹೊರಗೆ ಬಂದು ಪಾರಾಗಿದ್ದಾರೆ. ಧಗಧಗಿಸಿ ಉರಿಯುತ್ತಿದ್ದಂತೆ ಹ್ಯಾಂಡ್ ಬ್ರೇಕ್ ಮುಕ್ತವಾದ ಕಾರು ಹಿಮ್ಮುಖವಾಗಿ ಚಲಿಸಿದೆ ಎನ್ನಲಾಗಿದೆ.

ಧಗಧಗಿಸುತ್ತಿದ್ದ ಕಾರು ಹಾಗೆಯೇ ರಸ್ತೆಯಲ್ಲಿ ಹಿಂದಕ್ಕೆ ಹೋಗಿದ್ದರೆ ಭಾರಿ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಆ ಕಾರನ್ನು ತಡೆದು ನಿಲ್ಲಿಸಿದ್ದು ನಿನ್ನೆಯ ಗಾಳಿ – ಮಳೆಗೆ ಮುರಿದುಬಿದ್ದಿದ್ದ ಒಂದು ಮರದ ಗೆಲ್ಲು!

ಸುಮಾರು ಎರಡು ಗಂಟೆ ವೇಳೆಗೆ ಉಡುಪಿಯಿಂದ ಧಾವಿಸಿ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು.

Check Also

ಉಡುಪಿ: ಪರ್ಕಳದ ಕೆರೆದಂಡೆ ನಾಲ್ಕನೇ ಬಾರಿ ಕುಸಿತ, ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಪರ್ಕಳ: ಇಲ್ಲಿನ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣವಾಗುತ್ತಿರುವ ಕೆರೆ ಈ ಬಾರಿಯೂ ಸಾಧಾರಣ ಮಳೆಗೇ ಕುಸಿದಿದೆ. ಸ್ಥಳಕ್ಕೆ ಉಡುಪಿ …

Leave a Reply

Your email address will not be published. Required fields are marked *

You cannot copy content of this page.