March 18, 2026
WhatsApp Image 2025-07-28 at 9.21.20 AM

ಶಿರ್ವ: ಕುಖ್ಯಾತ ಅಂತರಾಜ್ಯ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿ ಆತನಿಂದ ಏಳು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಮತ್ತು ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ.

ಶಿರ್ವ ಠಾಣೆಯ ಮಟ್ಟಾರು ಬಬ್ಬರ್ಯ ದೈವಸ್ಥಾನದ ಬಳಿಯ ನಿವಾಸಿ ಪವಿತ್ರಾ ಪೂಜಾರ್ತಿ ಅವರ ಮನೆಯೊಳಗೆ ಪ್ರವೇಶಿಸಿದ್ದ ಕಳ್ಳರು ೧೩೭ ಗ್ರಾಂ ತೂಕದ, 12,75,000 ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ಆದೇಶದಂತೆ ಶಿರ್ವ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಇತ್ತೆ ಬರ್ಪೆ ಅಬೂಬಕ್ಕರ್ ನನ್ನು ಬಂಧಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.