ಮಣಿಪಾಲ: ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟ ವಿದ್ಯಾರ್ಥಿ ತ್ರಿವೆಂಡಮ್‌ನ ಆರೊನ್ ರೋಜರ್ ಲೀನ್(17) ಹಾಗೂ ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ ಮುಳುಗಡೆಯಾಗಿದ್ದರು. ಇದೀಗ ಆರೊನ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮಾಧವ್ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ವೇಳೆ ಇಬ್ಬರು ವಿದ್ಯಾರ್ಥಿಗಳು ಪಾರಾಗಿದ್ದರು. ನೀರಿನಲ್ಲಿ ಮುಳುಗಡೆಯಾಗಿದ್ದವರನ್ನು ಸ್ಥಳೀಯರು ಕೂಡಲೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಮೃತ ವಿದ್ಯಾರ್ಥಿ ಆರೊನ್ ಪೋಷಕರು ವಿದೇಶದಿಂದ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
Check Also
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …