ಬೆಳ್ತಂಗಡಿ: ಸ್ಪೋಟ ಪ್ರಕರಣವನ್ನು NIA ಗೆ ವಹಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ

ಬೆಳ್ತಂಗಡಿ ಕುಕ್ಕೇಡಿ ಸ್ಪೋಟ ಪ್ರಕರಣವನ್ನು ಎನ್.ಐ‌.ಎ ಗೆ ವಹಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಹಿಂಜಾವೇ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಅವರು ಕುಕ್ಕೇಟಿಯಲ್ಲಿ ಭಾನುವಾರ ನಡೆದ ಸ್ಫೋಟದ ತೀವೃತೆ ಅತೀ ಹೆಚ್ಚಾಗಿತ್ತು.

ಕೇವಲ ಪಟಾಕಿ ತಯಾರಿಕಾ ಘಟಕದಲ್ಲಿ ಇಂಥಹ ತೀವೃತೆ ಇರಲು ಸಾಧ್ಯವಿಲ್ಲ ಮತ್ತು ಸ್ಫೋಟದ ತೀವೃತೆ 4 ಕಿಲೋಮೀಟರ್ ವರೆಗೂ ವ್ಯಾಪಿಸಿತ್ತು. ಸ್ಪೋಟಕ್ಕೆ ಸಿಲುಕಿದ ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿದೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಮತ್ತು ಕೇರಳದ ಚರ್ಚ್ ನಲ್ಲಿ ನಡೆದ ಬಾಂಬ್ ಸ್ಪೋಟಕ್ಕೂ ಈ ಘಟನೆಗೂ ಸಾಮ್ಯತೆ ಇರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ ಅವರು ಪ್ರಕರಣದ ಸತ್ಯಾಸತ್ಯತೆಯ ತನಿಖೆಯಾಗಬೇಕು ಮತ್ತು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಯಲೇಬೇಕಿದೆ. ಸರಕಾರ ಮತ್ತು ಪೋಲೀಸ್ ಇಲಾಖೆ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.