March 12, 2026
WhatsApp Image 2024-03-29 at 10.28.45 AM

ಮಂಗಳೂರು: ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅವಿವಾಹಿತರಾಗಿರೋ 42 ವರ್ಷ ಪ್ರಾಯದ ಬ್ರಿಜೇಶ್ ಚೌಟ ನಾಮಪತ್ರದ ಅಫಿದವಿತ್ ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ. ಎಪ್ರಿಲ್ 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಸಾಂಕೇತಿಕ ನಾಮಪತ್ರದಲ್ಲಿ ಆಸ್ತಿ ವಿವರ ಘೋಷಿಸಿರುವ ಚೌಟ ಅವರು, ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂಪಾಯಿ ಆಗಿದ್ದು ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ.ಆಗಿದೆ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ. ಇದೆ. ಚೌಟಾಗೆ ಒಟ್ಟು 9,62,010 ರೂ. ಗಳ ಇನ್ನೋವಾ ಕಾರಿಗಾಗಿ ಸಾಲ ಇರುವುದಾಗಿ ತಿಳಿಸಿದ್ದಾರೆ. ಇನ್ನು ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಇಂದೋರ್ ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.