March 29, 2026
WhatsApp Image 2026-03-29 at 8.15.39 AM

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಸ್ಕೂಟರ್ ಸವಾರನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಹೆಮ್ಮಾಡಿ ಕಡೆಯಿಂದ ಕುಂದಾಪುರದತ್ತ ಸಂಚರಿಸುತ್ತಿದ್ದ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ಹೆಲ್ಮೆಟ್ ಧರಿಸದೇ ನಾನಾ ರೀತಿಯ ಭಂಗಿಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಫೌಜಾನ್ ಅಹ್ಮದ್ (25) ಬಂಧಿತನಾಗಿದ್ದಾನೆ.

ಮಾ.20ರಂದು ಈತನ ವ್ಹೀಲಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿದ ಕುಂದಾಪುರ ಸಂಚಾರ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.