ಬೆಳ್ತಂಗಡಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ. ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ರಸ್ತೆಯಾಗಿ ಅಪಘಾತ ನಡೆದಿದೆ.ವೇಗವಾಗಿ ಬಂದ ಕಾರು ಡಿವೈಡರ್ ಮೇಲಿನ ಬೀದಿದೀಪಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಪ್ರಜ್ವಲ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ. ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು.