ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ; ಇಬ್ಬರ ಬಂಧನ

ಮಂಗಳೂರು: ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ (30), ಸೂರಜ್ ರೈ(26) ಬಂಧಿತ ಆರೋಪಿಗಳು. ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ದ್ವಿಚಕ್ರ ವಾಹನದಲ್ಲಿ ಮಂಗಳೂರಿಗೆ ಸಾಗಿಸುತ್ತಿದ್ದರು. ಇಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಕೆ.ಸಿ.ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 75 ಸಾವಿರ ಮೌಲ್ಯದ 15 ಗ್ರಾಂ ಎಂಡಿಎಂಎ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕಮಾಪಕ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,65,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.