ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ ಉಮೇಶ್​ ಬಳೆಗಾರ ಎಂದು ಗುರುತಿಸಲಾಗಿದೆ. ಕಳೆದ ಆಗಸ್ಟ್ 12ರಂದು ಉಜಿರೆ ಗ್ರಾಮದ ಕಲ್ಲೆ ನಿವಾಸಿ ಫೆಲಿಕ್ಸ್ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳಗೆ ನುಗ್ಗಿದ ಆರೋಪಿ 15 ಪವನ್ ಚಿನ್ನಾಭರಣ ಮತ್ತು 20 ಸಾವಿರ ನಗದು ಎಗರಿಸಿ ಪರಾರಿಯಾಗಿದ್ದನು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿ ಉಮೇಶ್​ ಬಳೆಗಾರನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.26 ರಂದು ಉಮೇಶ್​ನನ್ನು ಮೈಸೂರು ಜಿಲ್ಲೆಯ ಝೂ ಪಾರ್ಕ್​ನಲ್ಲಿ ವಶಕ್ಕೆ ಪಡೆದ ಪೊಲೀಸರು ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಿ ಎರಡು ದಿನ ಕಸ್ಟಡಿಗೆ ಪಡೆದಿದ್ದರು. ಆರೋಪಿಯಿಂದ ಕದ್ದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಉಮೇಶ್ ಬಳೆಗಾರ ಮೂಲತಃ ಆಂದ್ರಪ್ರದೇಶದವನಾಗಿದ್ದು, ಮೊದಲ ಪತ್ನಿಗೆ ಮೂವರು ಮಕ್ಕಳಿದ್ದಾರೆ. ಮಕ್ಕಳು ಕೂಡ ಕಳ್ಳತನದಲ್ಲಿ ತೊಡಗಿಕೊಂಡಿದ್ದರು ಎಂದು ತಿಳಿದುಬಂದಿದೆ.

Check Also

ಬಿಜೆಪಿಯ ಉಚ್ಚಾಟನೆಗೆ ನಾನು ತಲೆಬಿಸಿ ಮಾಡಿಕೊಳ್ಳಲ್ಲ : ರಘುಪತಿ ಭಟ್

ಉಡುಪಿ: ಬಿಜೆಪಿಯಿಂದ ನನ್ನನ್ನು ಉಚ್ಛಾಟನೆ ಮಾಡಿರುವುದು ಮಾಧ್ಯಮದ ಮೂಲಕ ತಿಳಿದು ಬೇಸರವಾಯಿತು. ಶಿಸ್ತು ಸಮಿತಿಯಿಂದ ನನಗೆ ಈವರೆಗೆ ಯಾವುದೇ ನೋಟಿಸ್ …

Leave a Reply

Your email address will not be published. Required fields are marked *

You cannot copy content of this page.