December 4, 2024
WhatsApp Image 2024-10-29 at 9.05.24 AM

ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಿ ಪ್ರಜೆ ಸಹಿತ 6 ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ.

ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸ್ಕೂಟರ್‌ನ್ನು ವಶಕ್ಕೆ ಪಡೆದಿದ್ದಾರೆ.

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಓಸಿಎಲ್ ಹಿಂಬಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ರವರಿಗೆ ದೊರೆತ ಖಚಿತ ಮಾಹಿತಿಯಂತೆ ಮೇರೆಗೆ ದಾಳಿ ನಡೆಸಿ, ಆರೋಪಿಗಳಾದ ಚಂದನ್, ಶರತ್ ಮಧುಸೂಧನ ಕೊಂಚಾಡಿ , ಧನುಷ್ ಆಕಾಶ್ ಭವನ, ಮುಖೇಶ್ ದೇರೆಬೈಲ್ ನೈಜಿರಿಯಾ ದೇಶದ ಪ್ರಜೆ, ಮೈಕಲ್ ಬಾಲಾಜಿ@ ಅಝಬೈಕ್ ಜಾನಿ ಯನ್ನು ಬಂಧಿಸಿದ್ದಾರೆ.

ಆರೋಪಿಗಳ ದಸ್ತಗಿರಿ ಮಾಡಿ ವಶದಲ್ಲಿದ್ದ 11 ಗ್ರಾಮ್ ಕೋಕೇನ್ ಮತ್ತು ಪ್ಯಾಕೇಟ್ ಸಮೇತ 30 ಗ್ರಾಂ ತೂಕದ ಎಮ್ಡಿಎಮ್ಎ 91,000 ರೂಪಾಯಿಗಳಷ್ಟು, ಒಟ್ಟು ಮೌಲ್ಯದ ಮಾದಕ ವಸ್ತುವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡಲು ಉಪಯೋಗಿಸುತ್ತಿದ್ದ( KA-02-KX-0616 ) ಸ್ಕೂಟರ್ ಮತ್ತು ಒಟ್ಟು 9 ಮೊಬೈಲ್‌ಗಳುನ್ನು ಸ್ವಾಧೀನಪಡಿಸಲಾಗಿದೆ.

ಆರೋಪಿಗಳಲ್ಲಿ 5 ಮಂದಿ ಮಂಗಳೂರಿನ ನಿವಾಸಿಗಳಾಗಿದ್ದು, ಒಬ್ಬ ಆರೋಪಿ ನೈಜೀರಿಯಾ ದೇಶದವನಾಗಿರುತ್ತಾನೆ. ಆರೋಪಿಗಳೆಲ್ಲರೂ ಕ್ಯಾಟರಿಂಗ್, ಪೈಂಟಿಂಗ್ ಸೇರಿದಂತೆ ಖಾಸಗಿ ಕೆಲಸ ಮಾಡುತ್ತಿದ್ದರು. ವಶಕ್ಕೆ ಪಡೆದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್, ಐ.ಪಿ.ಎಸ್ ರವರ ಮಾರ್ಗದರ್ಶನಂದಂತೆ, ಕಾನೂನು & ಸುವ್ಯವಸ್ಥೆ ವಿಭಾಗದ ಡಿಸಿಪಿ ,ಸಿದ್ದಾರ್ಥ ಗೋಯಲ್ ಐ.ಪಿ.ಎಸ್ ಮತ್ತು ಅಪರಾಧ & ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನದಂತೆ, ಮಂಗಳೂರು ಉತ್ತರ ವಿಭಾಗದ ಎ.ಸಿ.ಪಿ. ಶ್ರೀ ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಶ್ರೀಮತಿ ಶ್ರೀಕಲಾ ಕೆ .ಟಿ ಮತ್ತು ಅಪರಾಧ ವಿಭಾಗದ ಸಿಬ್ಬಂದಿಗಳಾದ ಹೆಚ್.ಸಿಗಳಾದ ಪ್ರೇಮಾನಂದ, ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್, ಚೆರಿಯನ್ ಕೆ, ಜೇಮ್ಸ್ ಸಿಪಿಸಿಗಳಾದ ಶಶಿಕುಮಾರ್, ರಾಕೇಶ್ ಎಲ್ ಎಮ್, ಮಂಜುನಾಥ ಹಾಗೂ ಮಂಗಳೂರು ನಗರ ಉತ್ತರ ಉಪ ವಿಭಾಗದ ANTI DRUG SQUAD ನ ಪಿಎಸ್ಐ ರಾಘವೇಂದ್ರ ಎಮ್ ನಾಯ್ಕ ಮತ್ತು ಸಿಬ್ಬಂದಿಗಳಾದ ಸುನೀಲ್ ಹೆಚ್ ಎಮ್, ವಿನಾಯಕ್, ಬಸವರಾಜ್ರವರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.