March 24, 2026
WhatsApp Image 2024-12-29 at 10.56.37 AM

ಬಂಟ್ವಾಳ: ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಆರು ವರ್ಷದ ‘ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ.

ಅಪಘಾತದಲ್ಲಿ ಮಗುವಿನ ತಂದೆ, ತಾಯಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಎಂಬವರ ಹಿರಿಯ ಪುತ್ರ ಶಾಝಿನ್ (6) ಎಂದು ಗುರುತಿಸಲಾಗಿದೆ.

ಸಲೀಂ ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ‘ಗಡಿಯಾರ ಎಂಬಲ್ಲಿ ಈಚರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಶಾಝಿನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಗಾಯಗೊಂಡ ಅಬ್ದುಲ್ ಸಲೀಂ, ಅವರ ‘ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.