March 20, 2026
WhatsApp Image 2026-01-30 at 9.30.24 AM

ಸುಳ್ಯ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.

ಮೃತ ಚಾಲಕನನ್ನು ಸುಂದರ ಚಿಟ್ಟಿಕ್ಕಾನ ( 56) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದು ಈ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ರಿಕ್ಷಾ ಚಾಲಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.