ಮಂಗಳೂರು: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ

ಮಂಗಳೂರು: ನಗರ ಹೊರವಲಯದ ಅಡ್ಯಾರ್ ಪದವು ಸಮೀಪದ 30 ವರ್ಷ ಪ್ರಾಯದ ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವನ್ನು ಸೊಂಟಕ್ಕೆ ಕಟ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ಹರೇಕಳ- ಪಾವೂರು ಕಡವಿನ ಬಳಿ ನಡೆದಿರುವುದಾಗಿ ವರದಿಯಾಗಿದೆ‌‌.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಮಧ್ಯಾಹ್ನದ ಬಳಿಕ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ‌. ಶುಕ್ರವಾರ ಸಂಜೆ ಈಕೆ ರಿಕ್ಷಾವೊಂದರಲ್ಲಿ ಅಡ್ಯಾರ್-ಹರೇಕಳ ಸೇತುವೆ ದಾಟಿ ಹರೇಕಳ-ಪಾವೂರು ಕಡವಿನ ಬಳಿ ಜಂಕ್ಷನ್‌ನಲ್ಲಿ ಇಳಿದಿದ್ದರು ಎನ್ನಲಾಗಿದೆ. ನಂತರ‌ ಈಕೆ ನದಿ ತೀರದ ಕಾಲುದಾರಿಯಾಗಿ ಪಾವೂರು ಗಾಡಿಗದ್ದೆ ಕಡೆ ನಡೆದುಕೊಂಡು ಹೋಗಿರುವುದನ್ನು ಸ್ಥಳೀಯರು ಕಂಡಿದ್ದರು ಎಂದು ತಿಳಿದು ಬಂದಿದೆ

ಚೈತ್ರಾ ತನ್ನ ಮಗುವಿನೊಂದಿಗೆ ಕಾಣೆಯಾದ ಸುದ್ದಿ ಪರಿಸರದಲ್ಲಿ ಹಬ್ಬಿದ್ದು ಹುಡುಕಾಡಿದರೂ ಪ್ರಯೋಜನವಾಗಲಿಲ್ಲ.‌ ಈ ಮಧ್ಯೆ ಚೈತ್ರಾ ಅವರ ಮೃತದೇಹ ಹರೇಕಳ ಪಾವೂರು ನದಿ ತೀರದಲ್ಲಿ ಪತ್ತೆಯಾಗಿದೆ. ಚೈತ್ರಾ ಅವರ ಸೊಂಟಕ್ಕೆ ಮಗುವನ್ನು ಕಟ್ಟಿ ಹಾಕಿರುವುದು ಕಂಡು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.‌ ಮೃತದೇಹವನ್ನು ವೆನ್ಲಾಕ್ ಶವಗಾರದಲ್ಲಿಡಲಾಗಿದ್ದು, ಪ್ರಕರಣ ದಾಖಲಿಸಿ ಕೊಂಡಿರುವ ಕೊಣಾಜೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

Check Also

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಐದು ತಾಲೂಕುಗಳ ಶಾಲೆ ,ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ …

Leave a Reply

Your email address will not be published. Required fields are marked *

You cannot copy content of this page.