ಪುತ್ತೂರು : ಮಹಿಳೆಯೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿದ್ದು, ಸಮಾಜದಲ್ಲಿ ಓರ್ವ ಪ್ರತಿಷ್ಠಿತ ವ್ಯಕ್ತಿಯಾಗಿದ್ದು, ನ್ಯಾಯಾಲಯವು ಯಾವುದೇ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ಪ್ರತಿಬಂಧಕಾಜ್ಞೆ ನೀಡಿರುತ್ತದೆ.