ವಿವಾಹಿತ ಮಹಿಳೆಯೊಬ್ಬರು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಎಂಬಲ್ಲಿ ನಡೆದಿದೆ. ಚಿಬಿದ್ರೆ ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31) ಹೃದಯಾಘಾತದಿಂದ ನಿಧನರಾದರು. ಮೃತರು ಗಂಡ, ಅತ್ತೆ, ತಂದೆ, ತಾಯಿ, ಅಕ್ಕ ಮತ್ತು ಇಬ್ಬರು ಸಹೋದರನ್ನು ಅಗಲಿದ್ದಾರೆ.
ಚಂದ್ರಕಲಾರವರು ಹಲವು ವರ್ಷಗಳಿಂದ ಹೃದಯಕ್ಕೆ ಸಂಬಂಧ ಪಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ಆಕೆ ನೆರಿಯ ಗ್ರಾಮದ ಬಾಂದಡ್ಕದಲ್ಲಿ ತಾಯಿ ಮನೆಯಲ್ಲಿ ವಾಸವಾಗಿದ್ದರು.
ನ.29ರಂದು ಸಂಜೆ ಸುಮಾರು 7 ಗಂಟೆಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಫತ್ರೆಗೆ ಸಾಗಿಸಲಾಯಿತು. ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ