March 5, 2026
WhatsApp Image 2024-11-30 at 12.08.16 PM

ಕಾಪು: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ.

ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು. ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ.

ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ದದ ಆರೋಪವು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಎಸ್ಪಿ ಡಾ.ಅರುಣ್, ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಅಧಿಕಾರಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.